Homeನ್ಯೂಸ್ರಾಜ್ಯಸಿದ್ದರಾಮಯ್ಯ-ಡಿಕೆಶಿ ರಹಸ್ಯ ಮಾತುಕತೆ.. ಸ್ಟಿಂಗ್ ವಿವಾದಕ್ಕೆ ಫುಲ್ ಸ್ಟಾಪ್?

ಸಿದ್ದರಾಮಯ್ಯ-ಡಿಕೆಶಿ ರಹಸ್ಯ ಮಾತುಕತೆ.. ಸ್ಟಿಂಗ್ ವಿವಾದಕ್ಕೆ ಫುಲ್ ಸ್ಟಾಪ್?

ರಾಜ್ಯ ಕಾಂಗ್ರೆಸ್‌ನಲ್ಲಿ ಎಲ್ಲವೂ ಸರಿಯಿಲ್ಲ ಅನ್ನೋ ಚರ್ಚೆಯ ನಡುವೆಯೇ ಇಬ್ಬರು ಪ್ರಭಾವಿ ನಾಯಕರ ಮಹತ್ವದ ಭೇಟಿ ನಡೆದಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಂದು ಬೆಳಗ್ಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ ಮಾಡಿದ್ದಾರೆ. ಬೆಂಗಳೂರಿನ ಕಾವೇರಿ ನಿವಾಸದಲ್ಲಿ ನಡೆದ ಸುಮಾರು ಒಂದು ಗಂಟೆ ಕಾಲ ಸಭೆ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

ಈ ಭೇಟಿಯ ವೇಳೆ ಸ್ಟಿಂಗ್ ಆಪರೇಷನ್ ವಿವಾದ ಪ್ರಮುಖವಾಗಿ ಚರ್ಚೆಗೆ ಬಂದಿದೆ. ಈ ಪ್ರಕರಣದಿಂದ ಕಾಂಗ್ರೆಸ್ ಪಕ್ಷಕ್ಕೆ ಮತ್ತು ಸರ್ಕಾರಕ್ಕೆ ಆಗುತ್ತಿರುವ ಹಾನಿ ಬಗ್ಗೆ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗುತ್ತಿದೆ.

ಸ್ಟಿಂಗ್ ವಿಚಾರವನ್ನು ಇನ್ನೂ ಎಳೆಯುವುದು ಪಕ್ಷದ ಹಿತದೃಷ್ಟಿಯಿಂದ ಒಳ್ಳೆಯದಲ್ಲ. ವಿವಾದಕ್ಕೆ ಆದಷ್ಟು ಬೇಗ ತಾರ್ಕಿಕ ಅಂತ್ಯ ಕಾಣಬೇಕು. ಪ್ರಕರಣದಲ್ಲಿ ತಪ್ಪಿತಸ್ಥರು ಯಾರೇ ಇದ್ದರೂ ಅವರ ವಿರುದ್ಧ ಕ್ರಮ ಜರುಗಿಸಬೇಕು. ತನಿಖೆಯ ವೇಗ ಹೆಚ್ಚಿಸಿ ವರದಿಯನ್ನು ಸರ್ಕಾರದ ಕೈಗೆ ತಲುಪಿಸಬೇಕು ಎಂಬ ಸಂದೇಶವನ್ನು ಸಿದ್ದರಾಮಯ್ಯ ನೀಡಿದ್ದಾರೆ ಎನ್ನಲಾಗಿದೆ.

ಇದೇ ರೀತಿ ಮುಂದುವರಿದರೆ ಪಕ್ಷಕ್ಕೂ ಸರ್ಕಾರಕ್ಕೂ ರಾಜಕೀಯವಾಗಿ ಹೊಡೆತ ಬೀಳಲಿದೆ. ಮುಂದಿನ ಚುನಾವಣೆಗಳ ಸಂದರ್ಭದಲ್ಲಿ ಇಂತಹ ಗೊಂದಲಗಳು ಎದುರಾದರೆ ತಾವು ಪ್ರಚಾರಕ್ಕೆ ಬರುವುದಿಲ್ಲ ಎಂಬ ಎಚ್ಚರಿಕೆಯನ್ನೂ ಸಿದ್ದರಾಮಯ್ಯ ನೀಡಿದ್ದಾರೆ ಎನ್ನುವ ಮಾಹಿತಿ ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ.

ಇನ್ನು ಸಿದ್ದರಾಮಯ್ಯ ಅವರ ಮಾತುಗಳಿಗೆ ಡಿಕೆ ಶಿವಕುಮಾರ್ ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎನ್ನಲಾಗಿದೆ. ನಾವಿಬ್ಬರೂ ಒಟ್ಟಾಗಿ ಹೋಗದಿದ್ದರೆ ಪಕ್ಷಕ್ಕೆ ಕಷ್ಟವಾಗುತ್ತದೆ. ಈ ವಿವಾದವನ್ನು ಆದಷ್ಟು ಬೇಗ ಒಂದು ಹಂತಕ್ಕೆ ತರುತ್ತೇನೆ ಎಂದು ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ಒಟ್ಟಿನಲ್ಲಿ ಈ ಒಂದು ಗಂಟೆಯ ಮಾತುಕತೆ ಕಾಂಗ್ರೆಸ್‌ನ ಆಂತರಿಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯಾಗಿ ಕಾಣುತ್ತಿದೆ.

ಸ್ಟಿಂಗ್ ಆಪರೇಷನ್ ವಿವಾದಕ್ಕೆ ತೆರೆ ಬೀಳುತ್ತಾ? ಸಿದ್ದರಾಮಯ್ಯ-ಡಿಕೆಶಿ ನಡುವಿನ ಅಂತರ ಕಡಿಮೆಯಾಗುತ್ತಾ? ಇಬ್ಬರು ನಾಯಕರು ಒಗ್ಗಟ್ಟಿನ ಸಂದೇಶ ನೀಡುತ್ತಾರಾ? ಅಥವಾ ಕಾಂಗ್ರೆಸ್‌ನ ಒಳಬಿಕ್ಕಟ್ಟು ಮತ್ತೊಂದು ತಿರುವು ಪಡೆದುಕೊಳ್ಳುತ್ತಾ? ಮುಂದಿನ ಬೆಳವಣಿಗೆಗಳ ಮೇಲೆ ರಾಜ್ಯ ರಾಜಕೀಯದ ಚಿತ್ತ ನೆಟ್ಟಿದೆ.

ನೇಷನ್ ನ್ಯೂಸ್ ಕನ್ನಡ – ರಾಜಕೀಯ ಬೆಳವಣಿಗೆಗಳ ಮೇಲೆ ನಿರಂತರ ನಿಗಾ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments